ಏಪ್ರಿಲ್ 23 ಮತ್ತು 24, 2022 ರಂದು ಹರಕ್ಷೇತ್ರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಯುವಕ ಯುವತಿಯರು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಮುದಾಯದ ಯುವ ಜನತೆಗೆ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿಕೊಡುವುದು ಇಂದಿನ ತುರ್ತು ಅವಶ್ಯಕತೆಗಳಲ್ಲೊಂದು. ಈ ನಿಟ್ಟಿನಲ್ಲಿ ವೀರಶೈವ ಪಂಚಮಸಾಲಿ ಸಮುದಾಯದ ಜಗದ್ಗುರು ಪೀಠವಾದ ಹರಕ್ಷೇತ್ರ ಹರಿಹರದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ತಮ್ಮದೇ ಆದ ನೂತನ ಉದ್ಯಮಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ ಉದ್ಯಮಿಯಾಗು - ಉದ್ಯೋಗ ನೀಡು ಸಮಾವೇಶ ಏರ್ಪಡಿಸಲಾಗಿದೆ.

ಅಲ್ಲದೆ, ಇಂದಿನ ದಿನಮಾನಸದಲ್ಲಿ ಕೌಶಲ್ಯತೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಬಗ್ಗೆ ನಮ್ಮ ಸಮುದಾಯದಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ - ಕೌಶಲ್ಯ ಕೃಷಿ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಿಮ್ಮನ್ನೆಲ್ಲಾ ಆತ್ಮೀಯವಾಗಿ ಸ್ವಾಗತಿಸಿದೆ