ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಶ್ರೀರಾಮ ಮಂದಿರ ಪ್ರತಿಷ್ಟಾನ ಟ್ರಸ್ಟ್, ನವರು ಆಹ್ವಾನ ನೀಡಿದ್ದಾರೆ.
ಜನವರಿ 22 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಅಯೋದ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಶ್ರೀರಾಮ ಮಂದಿರ ಪ್ರತಿಷ್ಟಾನ ಟ್ರಸ್ಟ್, ನವರು ಆಹ್ವಾನ ನೀಡಿದ್ದಾರೆ. ಜಗದ್ಗುರುಗಳು ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಶ್ರೀ ಪೀಠದ ಆಡಳಿತಾಧಿಕಾರಿ ಡಾ.ರಾಜ್ ಕುಮಾರ್ ತಿಳಿಸಿದ್ದಾರೆ.